5 ಪೈಸೆ ವರದಕ್ಷಿಣೆ(ವಸುಧೇಂದ್ರ) - 5 Paise Varadakshine(Vasudhendra)
- Product Code: XN-PV-V
- Availability: In Stock
- ₹280.00
₹252.00
ಕತೆಗಾರರೂ, ಬರಹಗಾರರೂ ಆದ ವಸುಧೇಂದ್ರ ಬರೆದಿರುವ ಸುಲಲಿತ ಪ್ರಬಂಧಗಳ ಸಂಕಲನ ಕೃತಿ ’5 ಪೈಸೆ ವರದಕ್ಷಿಣೆ’. ಲೇಖಕರ ಬಾಲ್ಯ, ಮತ್ತು ಅವರ ವೃತ್ತಿ ಬದುಕಿನ ಬಗ್ಗೆಯೂ ಇಲ್ಲಿರುವ ಪ್ರಬಂಧಗಳಲ್ಲಿ ಪ್ರಸ್ತಾಪವಿದೆ. ಚುಕ್ಕಿ ಬಾಳೆಯ ಹಣ್ಣನ್ನು ಕಂಡಾಗಲೆಲ್ಲ ಲೇಖಕರನ್ನು ಕಾಡುವ ನೆನವರಿಕೆ, ವಾರಣಾಸಿಯಲ್ಲಿನ ಪ್ರವಾಸಾನುಭವ, ಚಾರಣಕ್ಕೆ ಹೊರಡುವವರ ಪೀಕಲಾಟ ಹೀಗೆ, ಎಲ್ಲ ನಮೂನೆಯ ವಿಷಯಗಳ ಕುರಿತಾದ ಬರಹಗಳಿವೆ. ಮಹಾಭಾರತದಲ್ಲಿನ ಒಳಸುಳಿಗಳನ್ನು ಬಿಚ್ಚಿಡುವ ಪ್ರಯತ್ನವೂ ಕೆಲ ಪ್ರಬಂಧ ಬರಹಗಳಲ್ಲಿ ನವಿರಾಗಿ ಸಾಗಿದೆ.

